TSK

TSK · ಅಪೊಸ್ತಲರ ಕೃತ್ಯಗ 18:19

Treasury of Scripture Knowledge references in ಕನ್ನಡ IRV.

Back to passage

ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.

¶ ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನೂ ಧರ್ಮಶಾಸ್ತ್ರಗಳಲ್ಲಿ ಪ್ರವೀಣನೂ ಆಗಿದ್ದನು.

ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು.

ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.

¶ ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,

ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು. ತ್ರೋವದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟು ಬಂದ ಮೇಲಂಗಿಯನ್ನೂ, ಪುಸ್ತಕಗಳನ್ನೂ, ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.

¶ ‹“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ,›‹ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು›‹ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,›