¶ ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.