TSK

TSK · ಅಪೊಸ್ತಲರ ಕೃತ್ಯಗ 9:23

Treasury of Scripture Knowledge references in ಕನ್ನಡ IRV.

Back to passage

¶ ‹“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.›

ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.

¶ ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.

ಕ್ರಿಸ್ತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು. ನದಿಗಳ ಅಪಾಯಗಳೂ, ಕಳ್ಳರ ಅಪಾಯಗಳೂ, ಸ್ವಂತ ಜನರಿಂದ ಅಪಾಯಗಳೂ, ಅನ್ಯಜನರಿಂದ ಅಪಾಯಗಳೂ, ಪಟ್ಟಣದಲ್ಲಿ ಅಪಾಯ, ನಿರ್ಜನ ಸ್ಥಳದಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ, ಸುಳ್ಳು ಸಹೋದರರೊಳಗಿನಿಂದಾದ ಅಪಾಯಗಳೂ ನನಗೆ ಸಂಭವಿಸಿದವು.

ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.