TSK

TSK · ಆಮೋಸ 2:13

Treasury of Scripture Knowledge references in ಕನ್ನಡ IRV.

Back to passage

ಅದು ನಿನ್ನ ಕಣದಲ್ಲಿ ಕಾಳನ್ನು ಕೂಡಿಸಿ, ನಿನ್ನ ಬೆಳೆಯನ್ನು ಹೊತ್ತುಕೊಂಡು ಬರುವುದೆಂದು ಭರವಸವಿಡುವೆಯಾ?

ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.

ನೀನು ನನಗೋಸ್ಕರ ಹಣಕೊಟ್ಟು ತೈಲವನ್ನು ತರಲಿಲ್ಲ, ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.

¶ “ನೀನು ನಿನ್ನ ಯೌವನ ಕಾಲವನ್ನು ಜ್ಞಾಪಕಮಾಡಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿರುವೆ” ಇದು ಕರ್ತನಾದ ಯೆಹೋವನ ನುಡಿ.