TSK

TSK · ಆಮೋಸ 9:3

Treasury of Scripture Knowledge references in ಕನ್ನಡ IRV.

Back to passage

ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?

ಆಗ ನೀನು ನಿನ್ನ ಶತ್ರುಗಳ ರಕ್ತದಲ್ಲಿ ಕಾಲಾಡಿಸುವಿ. ನಿನ್ನ ನಾಯಿಗಳ ನಾಲಿಗೆಗಳಿಗೆ ವೈರಿಗಳ ದೇಹದಲ್ಲಿ ಪಾಲುಸಿಕ್ಕುವುದು” ಎಂದು ನುಡಿದನು.

ಅಲ್ಲಿಯೂ ನಿನ್ನ ಕೈ ನನ್ನನ್ನು ನಡೆಸುವುದು; ನಿನ್ನ ಬಲಗೈ ನನ್ನನ್ನು ಹಿಡಿದಿರುವುದು.

¶ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.

ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”