TSK

TSK · ದಾನಿಯೇಲನು 2:11

Treasury of Scripture Knowledge references in ಕನ್ನಡ IRV.

Back to passage

¶ ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.

ಆಗ ಆ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ” ಎಂದು ಹೇಳಿದರು. ಆದರೂ ಫರೋಹನ ಹೃದಯವು ಕಠಿಣವಾಗಿತ್ತು. ಯೆಹೋವನು ಮೋಶೆಗೆ ಮುಂತಿಳಿಸಿದಂತೆಯೇ ಫರೋಹನು ಅವರ ಮಾತನ್ನು ಕೇಳದೆ ಹೋದನು.

ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು. ಯೆಹೋವನೆಂಬ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ.’”

ಆದರೆ ದೇವರು ನಿಜವಾಗಿ ಮನಷ್ಯರೊಡನೆ ಭೂಲೋಕದಲ್ಲಿ ವಾಸವಾಗಿರುವನೋ? ಸ್ವರ್ಗವೂ, ಸ್ವರ್ಗಾಧಿ ಸ್ವರ್ಗವೂ ನಿನ್ನ ವಾಸಕ್ಕೆ ಸಾಲವು, ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಆಲಯವು ನಿನಗೆ ಹೇಗೆ ಸಾಕಾದೀತು?

ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ,

ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.

ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.

¶ ಅದಕ್ಕೆ ದಾನಿಯೇಲನು ರಾಜನನ್ನು ಕುರಿತು, “ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು.

¶ “ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು.

ಯೇಸು ಅವರನ್ನು ದೃಷ್ಟಿಸಿ ನೋಡಿ ‹“ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ”› ಅಂದನು.

¶ ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.

ಯೇಸು ಅವನಿಗೆ, ‹“ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.›

ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.