TSK

TSK · ದಾನಿಯೇಲನು 2:40

Treasury of Scripture Knowledge references in ಕನ್ನಡ IRV.

Back to passage

ಆ ಮೇಲೆ ಕಬ್ಬಿಣದ ಹಲ್ಲು, ತಾಮ್ರದ ಉಗುರುಳ್ಳ ಮೃಗವು ಕೆಲವನ್ನು ನುಂಗಿ ಕೆಲವನ್ನು ಚೂರುಚೂರು ಮಾಡಿ ಉಳಿದದ್ದನ್ನು ಕಾಲುಗಳಿಂದ ತುಳಿದು, ಇತರ ಮೃಗಗಳಿಗಿಂತ ವಿಲಕ್ಷಣವಾಗಿ ಅತಿ ಭಯಂಕರವಾಗಿತ್ತು.

ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ ವೃದ್ಧಿಗೆ ಬಂದು, ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ, ದೇವಜನರನ್ನೂ ಧ್ವಂಸಮಾಡುವನು.

¶ “ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.

ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು.