TSK

TSK · ದಾನಿಯೇಲನು 3:4

Treasury of Scripture Knowledge references in ಕನ್ನಡ IRV.

Back to passage

ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.

ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು!

¶ ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!

¶ ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ!

ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”