TSK

TSK · ದಾನಿಯೇಲನು 4:25

Treasury of Scripture Knowledge references in ಕನ್ನಡ IRV.

Back to passage

ಅವರು ಕೊರತೆಯಿಂದಲೂ, ಹಸಿವಿನಿಂದಲೂ ಸೊರಗಿ, ನಿನ್ನೆಯವರೆಗೂ ಹಾಳುಬೀಳಾದ ಒಣ ನೆಲವನ್ನು ನೆಕ್ಕುವರು.

ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.

‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.

ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.

ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.