TSK

TSK · ದಾನಿಯೇಲನು 4:6

Treasury of Scripture Knowledge references in ಕನ್ನಡ IRV.

Back to passage

ಆ ಬತ್ತಿ ಹೋಗಿದ್ದ ಈ ತೆನೆಗಳು ಆ ಏಳು ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಆಗ ಫರೋಹನು ಎಚ್ಚೆತ್ತು, ಅದನ್ನು ಕನಸೆಂದು ತಿಳಿದುಕೊಂಡನು.

ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.

ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.

ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ; ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಭೂಮಿಯ ಹುಲ್ಲು ಮೃಗಗಳಿಗೆ ಗತಿಯಾದಂತೆ ಅದಕ್ಕೆ ಗತಿಯಾಗಲಿ.