TSK

TSK · ದಾನಿಯೇಲನು 5:25

Treasury of Scripture Knowledge references in ಕನ್ನಡ IRV.

Back to passage

ಆತನು ನಿನ್ನ ಕೂಡ ಇಸ್ರಾಯೇಲ್ಯರೆಲ್ಲರನ್ನೂ ಫಿಲಿಷ್ಟಿಯರ ಕೈಗೆ ಒಪ್ಪಿಸುವನು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಆತನು ಇಸ್ರಾಯೇಲ್ಯರ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವನು” ಎಂದು ಹೇಳಿದನು.

ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ. ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು.

ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.

ಆತನು ತನ್ನ ಭುಜಪರಾಕ್ರಮದಿಂದ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ.