TSK

TSK · ದಾನಿಯೇಲನು 7:1

Treasury of Scripture Knowledge references in ಕನ್ನಡ IRV.

Back to passage

¶ ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, “ಯಾಕೋಬನೇ, ಯಾಕೋಬನೇ” ಎಂದು ಕರೆಯಲು, ಅವನು, “ಇಗೋ ಇದ್ದೇನೆ” ಎಂದನು.

ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ, ರಾತ್ರಿಯ ಕನಸುಗಳಿಂದ ಯೋಚನೆಗಳಲ್ಲಿರುವಾಗ

¶ ಆ ಮೇಲೆ ಯೆಹೋವನು ನನಗೆ, “ದೊಡ್ಡ ಹಲಗೆಯನ್ನು ತೆಗೆದುಕೊಂಡು ಸಾಧಾರಣ ಲೇಖನಿಯಿಂದಲೇ ವಿಷಯ ಸೂಚಕವಾದ ಈ ಪದವನ್ನು ಬರೆ, ‘ಮಹೇರ್ ಶಾಲಾಲ್ ಹಾಷ್ ಬಜ್’ ಅಂದರೆ ಸೂರೆಗೆ ಅತುರ, ಕೊಳ್ಳೆಗೆ ಅವಸರ.

ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.

ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ಹೇಳಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.

¶ ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.

ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.

¶ ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.

ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.

ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.

¶ ಮೊದಲು ನನಗೆ ಕಾಣಿಸಿದ ಕನಸಲ್ಲದೆ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ ಇನ್ನೊಂದು ಕನಸು ದಾನಿಯೇಲನಾದ ನನಗೆ ಕಾಣಿಸಿತು.

ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.

“ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು;

¶ ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳುವುದು ನನಗೆ ಅನಿವಾರ್ಯವಾಗಿದೆ. ಆದ್ದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳನ್ನೂ ಮತ್ತು ತಿಳಿಯಪಡಿಸಿದ ರಹಸ್ಯಗಳನ್ನೂ ಕುರಿತು ಹೇಳುತ್ತೇನೆ.

ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು.