TSK

TSK · ದಾನಿಯೇಲನು 7:8

Treasury of Scripture Knowledge references in ಕನ್ನಡ IRV.

Back to passage

“ಇನ್ನು ಮುಂದೆ ಗರ್ವದಿಂದ ಮಾತನಾಡಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗಿನೋಡುವನು.

ಈ ನಾಲ್ಕನೆಯ ಮೃಗದ ವಿಷಯವಾಗಿಯೂ, ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ

ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿಣಮುಖನೂ, ತಂತ್ರವುಳ್ಳವನೂ ಆದ ಒಬ್ಬ ರಾಜನು ತಲೆದೋರುವನು.

ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.

ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.

¶ ಆ ಮಿಡತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆಯೂ, ಅವುಗಳ ಮುಖಗಳು ಮನುಷ್ಯರ ಮುಖಗಳಂತೆಯೂ ಇದ್ದವು.

¶ ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.