TSK

TSK · ದಾನಿಯೇಲನು 8:10

Treasury of Scripture Knowledge references in ಕನ್ನಡ IRV.

Back to passage

ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಆಕಾಶಕ್ಕೆ ಏರಿ, ನನ್ನ ಸಿಂಹಾಸನವನ್ನು ದೇವರ ನಕ್ಷತ್ರಗಳಿಗಿಂತ ಘನತೆಗೇರಿಸಿ, ಉತ್ತರದಿಕ್ಕಿನ ಕಟ್ಟಕಡೆಯಿರುವ ಸಮೂಹ ಪರ್ವತದ ಮೇಲೆ ಆಸೀನನಾಗುವೆನು.

ನನ್ನ ಕನಸಿನಲ್ಲಿ ಟಗರನ್ನು ಸಮೀಪಿಸಿ, ಅದರ ಮೇಲಣ ಕ್ರೋಧದಿಂದ ಉರಿಯುತ್ತಾ, ಅದರ ಮೇಲೆ ಹಾಯ್ದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದಕ್ಕೆ ಎದುರು ಬೀಳಲು ಟಗರಿಗೆ ಶಕ್ತಿಯಿರಲಿಲ್ಲ. ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿದು ಹಾಕಿತು. ಟಗರನ್ನು ಹೋತದಿಂದ ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ.

ಅನಂತರ ಉತ್ತರ ದಿಕ್ಕಿನ ರಾಜನು ಬಹಳ ಆಸ್ತಿಯನ್ನು ಐಶ್ವರ್ಯವನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂದಿರುಗುವನು. ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವುದು. ಅವನು ತನಗೆ ಇಷ್ಟ ಬಂದಂತೆ ಮಾಡಿ ಮತ್ತೆ ಸ್ವದೇಶವನ್ನು ಸೇರುವನು.

ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ, ಅವರು ಬಹಳ ದಿನ ಕತ್ತಿ, ಬೆಂಕಿ, ಸೆರೆಸೂರೆಗಳಿಗೆ ಸಿಕ್ಕಿ ಬೀಳುವರು.