TSK

TSK · ದಾನಿಯೇಲನು 9:10

Treasury of Scripture Knowledge references in ಕನ್ನಡ IRV.

Back to passage

ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು.

ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತನಾಡಿ, ಅವರಿಗೆ ನೀತಿನಿಯಮಗಳನ್ನೂ, ಯಥಾರ್ಥ ಧರ್ಮೋಪದೇಶವನ್ನೂ, ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದೆ.

ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.

¶ ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.