TSK

TSK · ದಾನಿಯೇಲನು 9:11

Treasury of Scripture Knowledge references in ಕನ್ನಡ IRV.

Back to passage

ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಇತರ ಜನಾಂಗಗಳಂತೆಯೇ ನೀವೂ ಆತನಿಂದ ನಾಶವಾಗಿ ಹೋಗುವಿರಿ.

¶ ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:

ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ,

ಯೆಹೋವನು ಇದನ್ನು ಕಂಡು ಅವರ ವಿಷಯದಲ್ಲಿ ಬೇಸರಗೊಂಡನು; ತನ್ನ ಕುಮಾರ ಕುಮಾರ್ತೆಯರ ವಿಷಯದಲ್ಲಿ ವ್ಯಥೆಪಟ್ಟನು.

ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು.

ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.

ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.

ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು ‘ಆಹಾ, ನಾನು ಎಂಥಾ ಕೆಲಸ ಮಾಡಿದೆ’ ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ.

ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪೂರ್ವಿಕರು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ, ಪೂಜಿಸಿ ನನ್ನನ್ನು ಬಿಟ್ಟು, ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ,

ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.

ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.