TSK

TSK · ಧರ್ಮೋಪದೇಶಕಾಂಡ 22:21

Treasury of Scripture Knowledge references in ಕನ್ನಡ IRV.

Back to passage

ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು.

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.

ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.

ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.

ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,

ಆಗ ಆ ಪುರುಷನನ್ನಾಗಲಿ ಅಥವಾ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲೆಸೆದು ಕೊಲ್ಲಬೇಕು.

ಅವನು ಆ ಮತ್ತೊಬ್ಬನಿಗೆ ಕೊಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು.

¶ ಯಾವನಾದರೂ ಇನ್ನೊಬ್ಬನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ತಿಳಿದುಬಂದರೆ ಆ ಸ್ತ್ರೀ ಮತ್ತು ಪುರುಷರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.

¶ ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ದೇವದಾಸಿಯಾಗಬಾರದು; ಯಾವ ಪುರುಷನೂ ಅಂತಹ ವೇಶ್ಯೆತನಕ್ಕೆ ಇಳಿಯಬಾರದು.

ಇಸ್ರಾಯೇಲ್ಯರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವುದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಾಯೇಲರಲ್ಲಿ ನಡೆಸಿದ ದುಷ್ಟ ಕಾರ್ಯಕ್ಕಾಗಿ ಅವರಿಗೆ ದಂಡನೆಮಾಡೋಣ” ಅಂದುಕೊಂಡರು.