TSK

TSK · ಪ್ರಸಂಗಿ 7:12

Treasury of Scripture Knowledge references in ಕನ್ನಡ IRV.

Back to passage

ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ” ಎಂದು ಹೇಳಿದನು.

ನೀನು ಅವನಿಗೂ, ಅವನ ಮನೆಗೂ, ಅವನ ಎಲ್ಲಾ ಸ್ವತ್ತಿಗೂ ಸುತ್ತು ಮುತ್ತಲು ನಿನ್ನ ಕೃಪೆಯ ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.

ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.

ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಅವನು ಯೆಹೋವನ ದಯೆಗೆ ಗುರಿಯಾಗುವನು.

ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.

ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.

‹ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ”› ಎಂದನು.

ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.