TSK

TSK · ಪ್ರಸಂಗಿ 7:21

Treasury of Scripture Knowledge references in ಕನ್ನಡ IRV.

Back to passage

ಕೆಲವು ಮಂದಿ ಅಯೋಗ್ಯರು, “ಇವನು ನಮ್ಮನ್ನು ರಕ್ಷಿಸುವನೋ?” ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.

“ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ.

ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ, ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು.