TSK

TSK · ಎಸ್ತೇರಳು 2:5

Treasury of Scripture Knowledge references in ಕನ್ನಡ IRV.

Back to passage

¶ ಬೆನ್ಯಾಮೀನ್ ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತ ಮತ್ತು ಪ್ರಭಾವಶಾಲಿಯಾದ ಮನುಷ್ಯನಿದ್ದನು. ಕೀಷನು ಅಬೀಯೇಲನ ಮಗ, ಅಬೀಯೇಲನು ಚೆರೋರನ ಮಗ, ಬೆಕೋರತನ ಮೊಮ್ಮಗ ಹಾಗೂ ಅಫೀಹನ ಮರಿಮಗನು.

ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿಯ ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಬಾಬೆಲಿನ ಅರಸನ ಬಳಿಗೆ ಹೋದನು. ಬಾಬೆಲಿನ ಅರಸನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.

ಅಹಷ್ವೇರೋಷ ರಾಜನು ಶೂಷನ್ ಕೋಟೆಯಲ್ಲಿ ತನ್ನ ರಾಜಸಿಂಹಾಸದಲ್ಲಿ ಆಸೀನನಾಗಿ ಆಡಳಿತ ನಡೆಸುತ್ತಿದ್ದನು.

ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ.

ಯೆಹೂದ್ಯನಾದ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನ ದ್ವಿತೀಯ ಸ್ಥಾನದವನೂ, ಯೆಹೂದ್ಯರಲ್ಲಿ ಸನ್ಮಾನಿತನೂ, ತನ್ನ ಬಂಧುಬಳಗಕ್ಕೆ ಪ್ರೀತಿಪಾತ್ರನೂ, ಸ್ವಜನರ ಹಿತಚಿಂತಕನೂ ಮತ್ತು ಸ್ವಕುಲದವರೆಲ್ಲರಿಗೂ ಶಾಂತಿದೂತನೂ, ಪ್ರಾರ್ಥನಾಪರನೂ ಆಗಿದ್ದನು.