TSK

TSK · ವಿಮೋಚನಕಾಂಡ 21:2

Treasury of Scripture Knowledge references in ಕನ್ನಡ IRV.

Back to passage

¶ ಅದಕ್ಕೆ ಏಸಾವನು, “ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗ ಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ” ಎಂದು ಹೇಳಿ ತನ್ನ ತಂದೆಯನ್ನು, “ನನಗೋಸ್ಕರವೂ ನಿನ್ನ ಬಳಿ ಆಶೀರ್ವಾದವಿಲ್ಲವೋ” ಎಂದು ಕೇಳಲು,

ಸೂರ್ಯೋದಯವಾದ ನಂತರ ಒಬ್ಬನು ಕಳ್ಳತನಮಾಡಿ ಸಿಕ್ಕಿಬಿದ್ದಾಗ, ಅವನನ್ನು ಹೊಡೆದು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಬೇಕು. ಅವನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂತಿರುಗಿಸಬೇಕು. ಅವನಲ್ಲಿ ಕೊಡಲು ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ಗುಲಾಮನಾಗಿ ಮಾರಲ್ಪಡಬೇಕು.

ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಮತ್ತು ಅವನ ಮಕ್ಕಳೂ ಬಿಡುಗಡೆಯಾಗಬೇಕು.

¶ ಸ್ವದೇಶದವರೊಳಗೆ ಯಾವ ಇಬ್ರಿಯ ಪುರುಷನಾಗಲಿ, ಸ್ತ್ರೀಯಾಗಲಿ ನಿಮಗೆ ದಾಸರಾಗಿರುವುದಕ್ಕಾಗಿ ಮಾರಲ್ಪಡುವ ಪಕ್ಷಕ್ಕೆ, ಅಂಥವರು ಆರು ವರ್ಷಗಳವರೆಗೂ ನಿಮ್ಮ ಸೇವೆ ಮಾಡಲಿ; ಏಳನೆಯ ವರ್ಷದಲ್ಲಿ ನೀವು ಅವರನ್ನು ಬಿಡುಗಡೆ ಮಾಡಬೇಕು.

ಆತನು ಅವರಿಗೆ, “ಪ್ರತಿ ಏಳು ವರ್ಷಗಳು ಪೂರ್ತಿಯಾದಾಗ ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ ಪರ್ಣಶಾಲೆಗಳ ಜಾತ್ರೆಯಲ್ಲಿ

¶ ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು.

¶ ಆ ಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇಮಿನವರೆಲ್ಲರೊಂದಿಗೆ ಸೇರಿ,

‘ನಿಮ್ಮಲ್ಲಿ ಪ್ರತಿಯೊಬ್ಬನು ನಿಮಗೆ ಆರು ವರ್ಷಗಳ ಕಾಲ ದಾಸನಾಗಿದ್ದು ನಿಮಗೆ ಸೇವೆ ಮಾಡಿದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಬೇಕು’ ಎಂದು ವಿಧಿಸಿ, ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.

ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.