TSK

TSK · ವಿಮೋಚನಕಾಂಡ 22:4

Treasury of Scripture Knowledge references in ಕನ್ನಡ IRV.

Back to passage

¶ ಒಬ್ಬನು ಎತ್ತನ್ನಾಗಲಿ, ಕುರಿಯನ್ನಾಗಲಿ ಕದ್ದುಕೊಂಡು ಕೊಯ್ದರೆ ಇಲ್ಲವೆ ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನು ಒಂದು ಕುರಿಗೆ ಬದಲಾಗಿ ನಾಲ್ಕು ಕುರಿಗಳನ್ನು ಕೊಡಬೇಕು.

ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದರ ವಿಷಯದಲ್ಲಿಯೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆಗಳ ವಿಷಯವಾದರೂ, ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ, ಇಬ್ಬರು ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾನೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.

ಅವನ ತಪ್ಪು ಬಯಲಾದರೆ ಅವನು ಏಳರಷ್ಟು ಕೊಡಬೇಕಾಗುವುದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ಕೊಟ್ಟು ತೀರಿಸಲೇಬೇಕು.

ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.”