TSK

TSK · ವಿಮೋಚನಕಾಂಡ 24:2

Treasury of Scripture Knowledge references in ಕನ್ನಡ IRV.

Back to passage

ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, ‘ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.’

ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.

ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.

ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.”

ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.