TSK

TSK · ವಿಮೋಚನಕಾಂಡ 25:13

Treasury of Scripture Knowledge references in ಕನ್ನಡ IRV.

Back to passage

ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳಿಂದಲೇ ಮೇಜನ್ನು ಎತ್ತಬೇಕು.

ಆ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು.

¶ ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು.

ಇವೆಲ್ಲವುಗಳ ಮೇಲೆ ಅವರು ಕಡುಗೆಂಪಾದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು.

ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಕೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.