TSK

TSK · ವಿಮೋಚನಕಾಂಡ 3:21

Treasury of Scripture Knowledge references in ಕನ್ನಡ IRV.

Back to passage

¶ ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.

ಯೆಹೋವನು ಇಸ್ರಾಯೇಲರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತ ದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಹಾಗು ಜನರು ಮೋಶೆಯನ್ನು ಮಹಾಶ್ರೇಷ್ಠಪುರುಷನೆಂದು ಭಾವಿಸಿದರು.

ಯೆಹೋವನು ಅವರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದ್ದರಿಂದ ಅವರು ಕೇಳಿಕೊಂಡದ್ದೆಲ್ಲವನ್ನು ಐಗುಪ್ತರು ಕೊಟ್ಟರು. ಹೀಗೆ ಇಸ್ರಾಯೇಲರು ಐಗುಪ್ತ್ಯರ ಸೊತ್ತನ್ನು ಸುಲಿದುಕೊಂಡರು.

ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು.

ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.