TSK

TSK · ವಿಮೋಚನಕಾಂಡ 3:9

Treasury of Scripture Knowledge references in ಕನ್ನಡ IRV.

Back to passage

ಆತನು ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ.

ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.

¶ ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.

ದೇವರು ಇಸ್ರಾಯೇಲರನ್ನು ನೋಡಿ ಅವರ ವಿಷಯದಲ್ಲಿ ಕನಿಕರಪಟ್ಟನು.

“ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.

ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.

ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ.

¶ ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.

¶ ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.