TSK

TSK · ವಿಮೋಚನಕಾಂಡ 31:2

Treasury of Scripture Knowledge references in ಕನ್ನಡ IRV.

Back to passage

¶ ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು.

¶ “ಬೆಚಲೇಲನು ಹಾಗೂ ಒಹೋಲೀಯಾಬನು ಮತ್ತು ಬೇರೆ ಜ್ಞಾನಿಗಳೆಲ್ಲರು ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ಪವಿತ್ರ ದೇವಮಂದಿರವನ್ನು ನಿರ್ಮಾಣ ಮಾಡುವ ಕೆಲಸಕ್ಕಾಗಿ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ ಮಾಡುವರು” ಅಂದನು.

¶ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನೇ ಮಾಡಿದನು.

ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು.

ನಿನ್ನ ಹೆಸರು ಹಿಡಿದು ಕರೆಯುವ ಯೆಹೋವನು ನಾನೇ. ಇಸ್ರಾಯೇಲರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಯನ್ನೂ, ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು.

ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.