TSK

TSK · ವಿಮೋಚನಕಾಂಡ 4:11

Treasury of Scripture Knowledge references in ಕನ್ನಡ IRV.

Back to passage

ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.

ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.

ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು.

ಇದಲ್ಲದೆ ನಿನ್ನ ನಾಲಿಗೆಯು ಸೇದಿ ಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸಲಾರೆ; ಅವರು ತಿರುಗಿ ಬೀಳುವ ಮನೆತನದವರಾಗಿದ್ದಾರೆ.

ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?