TSK

TSK · ವಿಮೋಚನಕಾಂಡ 7:1

Treasury of Scripture Knowledge references in ಕನ್ನಡ IRV.

Back to passage

ನೀನು ಅವನ ಸಂಗಡ ಮಾತನಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಿಕೊಡು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.

ನೋಡಿರಿ, ಯೆಹೋವನು ನಿಮಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಅಪ್ಪಣೆಕೊಟ್ಟಿರುವುದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವ ಸ್ಥಳದಲ್ಲಿ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು” ಎಂದು ಹೇಳಿದನು.

¶ ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ” ಎಂದು ಹೇಳಿದನು.

‘ನೋಡು, ಇದು ಹೊಸದು’ ಎಂದು ಯಾವ ವಿಷಯದಲ್ಲಾದರೂ ಹೇಳಬಹುದೋ? ನಮಗಿಂತ ಮೊದಲು ಇದ್ದದ್ದು, ಪುರಾತನ ಕಾಲದಿಂದ ಇದ್ದದ್ದೇ.

‹ಧರ್ಮಶಾಸ್ತ್ರವು ನಿರರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು ಹೊಂದಿರುವವರಿಗೆ ‘ದೇವರುಗಳೆಂದೂ,’ ಆತನು ಕರೆದಿರುವುದಾದರೆ›