TSK

TSK · ವಿಮೋಚನಕಾಂಡ 7:19

Treasury of Scripture Knowledge references in ಕನ್ನಡ IRV.

Back to passage

ಆ ಎರಡು ಸೂಚಕಕಾರ್ಯಗಳನ್ನೂ, ಅವರು ನಂಬದೆಯೂ, ನಿನ್ನ ಮಾತನ್ನು ಕೇಳದೆಯೂ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದುಕೊಂಡು ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ಒಣಗಿದ ನೆಲದಲ್ಲಿ ಸುರಿದ ನೀರು ರಕ್ತವಾಗುವುದು” ಎಂದು ಹೇಳಿದನು.

¶ ತರುವಾಯ ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳೆಲ್ಲಾ ಹೇನುಗಳಾಗುವುದು’” ಎಂದನು.

ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಕ್ಕೆ ಬಂದು ಕೈಯನ್ನೆತ್ತಿ ಯೆಹೋವನನ್ನು ಪ್ರಾರ್ಥಿಸಿದನು. ಗುಡುಗೂ, ಆನೆಕಲ್ಲಿನ ಮಳೆಯೂ ನಿಂತುಹೋದವು.

¶ ತರುವಾಯ ಯೆಹೋವನು ಮೋಶೆಗೆ, “ಆಕಾಶಕ್ಕೆ ನಿನ್ನ ಕೈಯನ್ನು ಚಾಚು. ಆಗ ಐಗುಪ್ತ ದೇಶದಲ್ಲೆಲ್ಲಾ ಕತ್ತಲು ಉಂಟಾಗುವುದು. ಆ ಕತ್ತಲೆಯಿಂದಾಗಿ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು.

¶ ಅಷ್ಟರಲ್ಲಿ ಯೆಹೋವನು ಮೋಶೆಗೆ, “ಸಮುದ್ರದ ಮೇಲೆ ನಿನ್ನ ಕೈಚಾಚು, ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ, ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು” ಎಂದು ಹೇಳಿದನು.