TSK

TSK · ಯೆಹೆಜ್ಕೇಲನು 21:23

Treasury of Scripture Knowledge references in ಕನ್ನಡ IRV.

Back to passage

ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.

ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.

ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.

“ನರಪುತ್ರನೇ, ಕ್ಲುಪ್ತಕಾಲವು ದೂರ ಹೋಗುತ್ತಲಿದೆ; ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬುದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಮಾತು ಎಂಥದ್ದು?”

¶ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಅಪರಾಧಗಳು ಬಯಲಿಗೆ ಬಂದು, ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ತಲೆದೋರಿ, ನೀವು ನಿಮ್ಮ ಅಧರ್ಮವನ್ನು ನನ್ನ ಜ್ಞಾಪಕಕ್ಕೆ ತಂದು, ಪಾಪಿಗಳಾಗಿ ನನ್ನ ನೆನಪಿಗೆ ತಂದಿರುವಿರಿ. ಆದುದರಿಂದ ಶತ್ರುವಿನ ಕೈಗೆ ಸಿಕ್ಕಿ ಬೀಳುವಿರಿ.

ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.