TSK

TSK · ಗಲಾತ್ಯದವರಿಗೆ 1:21

Treasury of Scripture Knowledge references in ಕನ್ನಡ IRV.

Back to passage

ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.

ತರುವಾಯ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು.

ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;

¶ ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.

¶ ಅದಕ್ಕೆ ಪೌಲನು; ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವುದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.

ದೇಶಾಧಿಪತಿಯು ಆ ಕಾಗದವನ್ನು ಓದಿ, ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು;