TSK

TSK · ಆದಿಕಾಂಡ 10:19

Treasury of Scripture Knowledge references in ಕನ್ನಡ IRV.

Back to passage

ತಗ್ಗು ಪ್ರದೇಶದಲ್ಲಿ ಒಟ್ಟಾಗಿ ಕೂಡಿದ್ದ ಸೊದೋಮಿನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯಿಮನ ಅರಸನಾದ ಶೆಮೇಬರನ, ಬೇಲಗ (ಅಂದರೆ ಚೋಗರದ) ಎಂಬ ಐದು ಅರಸರ ವಿರುದ್ಧವಾಗಿ ಯುದ್ಧ ಮಾಡಿದರು.

¶ ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು,

¶ ಅಬ್ರಹಾಮನು ಅಲ್ಲಿಂದ ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸ ಮಾಡಿ ಕೆಲವು ಕಾಲ ಗೆರಾರಿನಲ್ಲೂ ವಾಸಮಾಡಿದನು.

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಸಮಸ್ತ ಕಾನಾನ್ ದೇಶವೇ ನಿಮಗೆ ಸ್ವದೇಶವಾಗಿ ದೊರಕುವುದು.

ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.

¶ ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ

¶ ತರುವಾಯ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.

ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ.

ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.