TSK

TSK · ಆದಿಕಾಂಡ 10:7

Treasury of Scripture Knowledge references in ಕನ್ನಡ IRV.

Back to passage

ಮೊದಲನೆಯದರ ಹೆಸರು ಪೀಶೋನ್, ಅದು ಬಂಗಾರ ದೊರೆಯುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.

ಶೆಬದವರು ಅವುಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ಈ ಸುದ್ದಿಯನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದು ಹೇಳಿದನು.

ಅರಬಿಯ ವಿಷಯವಾದ ದೈವೋಕ್ತಿ. ಓ ದೇದಾನ್ಯರೇ, ಅರಬಿಯದ ಮರುಭೂಮಿಯಲ್ಲಿ ಇಳಿದುಕೊಳ್ಳಿರಿ.

ದೇದಾನಿನವರು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿದ್ದರು.