TSK

TSK · ಆದಿಕಾಂಡ 12:18

Treasury of Scripture Knowledge references in ಕನ್ನಡ IRV.

Back to passage

¶ ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.

ಅಬೀಮೆಲೆಕನು ಅಬ್ರಹಾಮನನ್ನು ಕರೆದು, “ನೀನು ನಮಗೆ ಮಾಡಿದ್ದೇನು? ನಾನು ಯಾವ ಪಾಪ ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ನೀನು ಮಾಡಬಾರದ ಕಾರ್ಯಗಳನ್ನು ಮಾಡಲು ನಾನು ನಿನಗೇನು ಮಾಡಿದೆ” ಎಂದು ಹೇಳಿ,

¶ ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಯಾಕೆ ಮಾಡಿದೆ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಸಂಗಮಿಸುವುದಕ್ಕೆ ಆಸ್ಪದವಾಗುತ್ತಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ?”

ಲಾಬಾನನು ಯಾಕೋಬನಿಗೆ, “ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಹೊರಟುಬಂದೆಯಲ್ಲಾ.

¶ ಆಗ ಮೋಶೆ ಆರೋನನನ್ನು ಕುರಿತು, “ನೀನು ಈ ಜನರಿಂದ ಮಹಾ ಅಪರಾಧವನ್ನು ಮಾಡಿಸಿದಿಯಲ್ಲಾ ಹೀಗೆ ಮಾಡಿಸುವುದಕ್ಕೆ ಇವರು ನಿನಗೇನು ಮಾಡಿದರು?” ಎಂದು ವಿಚಾರಿಸಲು,

ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು’ ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?

“ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದಿದ್ದನಂತೆ. ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದೇಕೆ?