TSK

TSK · ಆದಿಕಾಂಡ 15:7

Treasury of Scripture Knowledge references in ಕನ್ನಡ IRV.

Back to passage

ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಮುಂದೆಯೇ ಸತ್ತನು.

¶ ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.

ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.

ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.

ಯೆಹೋವನೇ, ಅಬ್ರಾಮನನ್ನು ಆರಿಸಿಕೊಂಡು ಕಸ್ದೀಯರ ಊರ್ ಎಂಬ ಪಟ್ಟಣದಿಂದ ಬರಮಾಡಿ, ಅವನಿಗೆ ಅಬ್ರಹಾಮನೆಂಬ ಹೆಸರನ್ನು ಕೊಟ್ಟ ದೇವರು ನೀನೇ.

ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ, ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು

ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;