TSK

TSK · ಆದಿಕಾಂಡ 16:3

Treasury of Scripture Knowledge references in ಕನ್ನಡ IRV.

Back to passage

ಆಗ ಸಾರಯಳು ಅಬ್ರಾಮನಿಗೆ, “ನನ್ನ ಗೋಳು ನಿನಗೆ ತಟ್ಟಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಿದ್ದಾಳೆ; ನಿನಗೂ ನನಗೂ ನಡುವೆ ಯೆಹೋವನೇ ನ್ಯಾಯತೀರಿಸಲಿ” ಎಂದು ಹೇಳಿದಳು.

ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು.

ತನ್ನ ದಾಸಿಯಾದ ಬಿಲ್ಹಳನ್ನು ಯಾಕೋಬನಿಗೆ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.

¶ ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟಿದನು.

¶ ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ದೂರ ಸ್ಥಳದಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇಮಿನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು.

ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಜನರು ಉಪಪತ್ನಿಯರಿದ್ದರು. ಈ ಸ್ತ್ರೀಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು.