ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು.
TSK
TSK · ಆದಿಕಾಂಡ 19:14
Treasury of Scripture Knowledge references in ಕನ್ನಡ IRV.
ಯಾರು ಯೆಹೋವನ ಮಾತನ್ನು ಮನಸ್ಸಿಗೆ ತೆಗೆದುಕೊಳ್ಳಲಿಲ್ಲವೋ, ಅವರು ತಮ್ಮ ಆಳುಗಳನ್ನೂ, ಪಶುಗಳನ್ನೂ ಹೊಲದಲ್ಲಿಯೇ ಬಿಟ್ಟರು.
“ನೀವು ಈ ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು.
“ನೀವಿಬ್ಬರೂ ಸಮೂಹದವರಲ್ಲಿ ಇರದೆ ಬೇರೆ ನಿಲ್ಲಬೇಕು. ನಾನು ಒಂದು ಕ್ಷಣಮಾತ್ರದಲ್ಲಿ ಅವರನ್ನು ದಹಿಸಿಬಿಡುತ್ತೇನೆ” ಎಂದು ಹೇಳಿದನು. ಆಗ ಮೋಶೆ ಮತ್ತು ಆರೋನರು ಬೋರಲುಬಿದ್ದರು.
ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.
ಆದುದರಿಂದ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಳಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವುದನ್ನು ಕೇಳಿದ್ದೇನೆ.
ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.
¶ “ಆಗ ನಾನು, ‘ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೇ?’ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ” ಎಂಬುದಾಗಿ ಅರಿಕೆಮಾಡಿದೆನು.
‹“ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ”› ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು.
‹ಮತ್ತು ಲೋಟನ ದಿನಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.›
¶ ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.
¶ ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.