TSK

TSK · ಆದಿಕಾಂಡ 19:21

Treasury of Scripture Knowledge references in ಕನ್ನಡ IRV.

Back to passage

ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.

¶ ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು.

ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.

ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.

ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು.

ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.