TSK

TSK · ಆದಿಕಾಂಡ 2:22

Treasury of Scripture Knowledge references in ಕನ್ನಡ IRV.

Back to passage

¶ ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.

ಪುರುಷನು ಸ್ತ್ರೀಯಿಂದ ಉತ್ಪತ್ತಿಯಾಗಲಿಲ್ಲ. ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು.

ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.