TSK

TSK · ಆದಿಕಾಂಡ 2:24

Treasury of Scripture Knowledge references in ಕನ್ನಡ IRV.

Back to passage

¶ ಯಾಕೋಬನು ಈ ಮಾತುಗಳನ್ನಾಡಿದಾಗ ರಾಹೇಲಳು ಮತ್ತು ಲೇಯಳು, “ನಮ್ಮ ತಂದೆಯ ಮನೆಯಲ್ಲಿ ನಮಗೆ ಪಾಲೂ ಸ್ವಾಸ್ತ್ಯತೆ ಇನ್ನೇನಿದೆ?

ನಿಮ್ಮ ದೇವರಾದ ಯೆಹೋವನನ್ನು ನೀವು ನಂಬಿ ನಡೆದುದರಿಂದ ನೀವಾದರೋ ಇಂದಿನವರೆಗೂ ಉಳಿದಿದ್ದೀರಿ.

ಈವರೆಗೆ ಹೇಗೊ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವನನ್ನೇ ಆತುಕೊಂಡಿರಿ.

ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು.

ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು? ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.

¶ ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು,

ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ.

ವಿವಾಹಿತರಿಗೆ ನನ್ನ ಅಪ್ಪಣೆ ಅಲ್ಲ ಕರ್ತನ ಆಜ್ಞೆಯು ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು.

ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.