TSK

TSK · ಆದಿಕಾಂಡ 20:11

Treasury of Scripture Knowledge references in ಕನ್ನಡ IRV.

Back to passage

ಐಗುಪ್ತ ದೇಶದವರು ನಿನ್ನನ್ನು ಕಂಡು, ಈಕೆಯು ಇವನ ಹೆಂಡತಿ ಎಂದು ತಿಳಿದು ನನ್ನನ್ನು ಕೊಂದು ನಿನ್ನನ್ನು ಉಳಿಸಬಹುದು.

ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು.

ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.

ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.

ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.