TSK

TSK · ಆದಿಕಾಂಡ 21:23

Treasury of Scripture Knowledge references in ಕನ್ನಡ IRV.

Back to passage

ಅನಂತರ ಯೆಹೋವನ ಆಣೆ ನಾನು ವಾಸವಾಗಿರುವ ಈ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡದೆ,

ಆದುದರಿಂದ ನಾವಿಬ್ಬರು ಸೇರಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ ಬಾ, ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ” ಎಂದು ಹೇಳಿದನು.

ಯೆಹೋವನು ಯೋಸೇಫನ ಸಂಡಗವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದನು.

ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆತೋರಿಸಿದಂತೆ ನೀವೂ ಸಹ ನನ್ನ ತಂದೆಯ ಮನೆಯವರಿಗೆ ದಯೆತೋರಿಸಬೇಕೆಂದು ಯೆಹೋವನ ಮೇಲೆ ವಾಗ್ದಾನ ನೀಡಬೇಕು.

ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಿದ್ದುದರಿಂದ ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು.

ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದಿಲ್ಲವೆಂದೂ, ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡು” ಎಂದು ಬೇಡಿಕೊಂಡ ಹಾಗೆ ದಾವೀದನು ಪ್ರಮಾಣಮಾಡಿದನು.

ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯೋ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರೆ ನಿನ್ನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು” ಅಂದನು.

¶ ನಿಮಗೆ ತೊಂದರೆ ಆಗಬಾರದೆಂದೇ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯ ಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.