TSK

TSK · ಆದಿಕಾಂಡ 27:37

Treasury of Scripture Knowledge references in ಕನ್ನಡ IRV.

Back to passage

¶ ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು.

ದಾವೀದನು ಎದೋಮಿನಲ್ಲೆಲ್ಲಾ ಕಾವಲುದಂಡನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.

ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಮೂಲಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು.