TSK

TSK · ಆದಿಕಾಂಡ 29:33

Treasury of Scripture Knowledge references in ಕನ್ನಡ IRV.

Back to passage

ರಾಹೇಲಳು, “ದೇವರು ನನ್ನ ಕಡೆಗೆ ನ್ಯಾಯತೀರಿಸಿದ್ದಾನೆ. ಆತನು ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿ ಅದಕ್ಕೆ “ದಾನ್” ಎಂದು ಹೆಸರಿಟ್ಟಳು.

ಲೇಯಳು, “ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದಕ್ಕೆ “ಇಸ್ಸಾಕಾರ್” ಎಂದು ಹೆಸರಿಟ್ಟಳು.

¶ ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳೂ, ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಯನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದು ಹಾಕಿದನು.

¶ ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.

ಸಿಮೆಯೋನನು ಲೇವಿಯೂ ಅಣ್ಣತಮ್ಮಂದಿರು. ಇವರ ಕತ್ತಿಗಳು ಹಿಂಸಾಚಾರದ ಆಯುಧಗಳು.