TSK

TSK · ಆದಿಕಾಂಡ 31:40

Treasury of Scripture Knowledge references in ಕನ್ನಡ IRV.

Back to passage

ಅದಕ್ಕೆ ಅವರು, “ಐಗುಪ್ತದವನಾದ ಒಬ್ಬ ಮನುಷ್ಯನು ನಮ್ಮನ್ನು ಕುರುಬರ ಕೈಯಿಂದ ತಪ್ಪಿಸಿದಲ್ಲದೆ, ಅವನು ನಮಗೋಸ್ಕರ ನೀರು ಸೇದಿ ಕುರಿಗಳಿಗೆ ಕುಡಿಸಿದನು” ಅಂದರು.

ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಆರಿಸಿಕೊಂಡು, ಕುರಿಹಟ್ಟಿಯಿಂದ ತೆಗೆದುಕೊಂಡು,

ಯಾಕೋಬನು ಪದ್ದನ್ ಅರಾಮಿಗೆ ಓಡಿಹೋದನು; ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ ಕುರಿಗಳನ್ನು ಕಾದನು.

ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, ‹“ಯೋಹಾನನ ಮಗನಾದ ಸೀಮೋನನೇ,›‹ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?”› ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, ‹“ನನ್ನ ಕುರಿಮರಿಗಳನ್ನು ಮೇಯಿಸು”› ಎಂದು ಹೇಳಿದನು.

ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.