TSK

TSK · ಆದಿಕಾಂಡ 32:22

Treasury of Scripture Knowledge references in ಕನ್ನಡ IRV.

Back to passage

¶ ತರುವಾಯ ಯಾಕೋಬನು ಲಾಬಾನನಿಗೆ, “ನನಗೆ ಗೊತ್ತು ಮಾಡಿದ ಕಾಲವು ಪೂರ್ತಿಯಾದವು. ರಾಹೇಲಳನ್ನು ನನಗೆ ಮದುವೆಮಾಡಿ ನನ್ನ ಸ್ವಾಧೀನಕ್ಕೆ ಕೊಡು” ಎಂದು ಕೇಳಿದನು.

¶ ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.

(ಪೂರ್ವದ) ಯಬ್ಬೋಕ್ ನದಿಯ ವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ (ದಕ್ಷಿಣ) ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ನದಿಯು ಅವರ (ಪೂರ್ವದಿಕ್ಕಿನವರೆಗೆ) ಮೇರೆ.

ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.