TSK

TSK · ಆದಿಕಾಂಡ 32:6

Treasury of Scripture Knowledge references in ಕನ್ನಡ IRV.

Back to passage

ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು.

ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ಬಿದ್ದರೂ ಮತ್ತೊಂದು ಗುಂಪು ತಪ್ಪಿಸಿಕೊಂಡು ಹೋಗಬಹುದು” ಅಂದುಕೊಂಡನು.

¶ ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಜನರ ಸಮೇತ ಬರುವುದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ

¶ ಏಸಾವನು, “ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ” ಎನ್ನಲು ಯಾಕೋಬನು, “ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು” ಎಂದು ಹೇಳಿದನು.

¶ ಅದಕ್ಕೆ ಅವರು, “ನಮ್ಮ ಪ್ರಾಣಗಳನ್ನು ಉಳಿಸಿದ್ದೀ; ನಮ್ಮ ಸ್ವಾಮಿಯ ದಯೆ ನಿಮ್ಮ ಮೇಲಿರಲಿ; ನಾವು ಫರೋಹನಿಗೆ ಗುಲಾಮರಾಗಿದ್ದೇವೆ” ಎಂದರು.

ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು.

ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.