TSK

TSK · ಆದಿಕಾಂಡ 33:5

Treasury of Scripture Knowledge references in ಕನ್ನಡ IRV.

Back to passage

¶ ಯಾಕೋಬನು ರಾಹೇಲಳ ಮೇಲೆ ಕೋಪಗೊಂಡು, “ದೇವರು ನಿನಗೆ ಮಕ್ಕಳನ್ನು ಕೊಡದೆ ಹೋದ ಮೇಲೆ ಕೊಡಲಿಕ್ಕೆ ನನ್ನಿಂದಾದೀತೋ” ಎಂದನು.

¶ ಬೋವಜನು ರೂತಳನ್ನು ಹೆಂಡತಿಯನ್ನಾಗಿ ಪರಿಗ್ರಹಿಸಿದ್ದರಿಂದ ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ಮಗನನ್ನು ಹೆತ್ತಳು.

ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.

ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ.