TSK

TSK · ಆದಿಕಾಂಡ 34:12

Treasury of Scripture Knowledge references in ಕನ್ನಡ IRV.

Back to passage

ಆ ಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ, ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ವಸ್ತುಗಳನ್ನು ಕೊಟ್ಟನು.

ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದೆನು. ನಿನ್ನ ಇಬ್ಬರು ಹೆಣ್ಣು ಮಕ್ಕಳಿಗೋಸ್ಕರ ಹದಿನಾಲ್ಕು ವರ್ಷವೂ ನಿನ್ನ ಆಡು ಕುರಿಗಳಿಗೋಸ್ಕರ ಆರು ವರ್ಷವೂ ಸೇವೆಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.

¶ ನಿಶ್ಚಿತಾರ್ಥವಾಗದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಸಂಗಮಿಸಿದರೆ ಅವಳಿಗೋಸ್ಕರ ತಕ್ಕ ತೆರವನ್ನು ಕೊಟ್ಟು ಅವಳನ್ನು ಮದುವೆಮಾಡಿಕೊಳ್ಳಬೇಕು.

ಆಗ ಅವನು ಅವರಿಗೆ, “ನೀವು ಹೋಗಿ ದಾವೀದನಿಗೆ, ‘ಅರಸನು ತೆರವನ್ನು ಅಪೇಕ್ಷಿಸುವುದಿಲ್ಲ. ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆ’ ಎಂದು ಹೇಳಿರಿ” ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬುದೇ ಅವನ ಉದ್ದೇಶವಾಗಿತ್ತು.

ಆಗ ನಾನು ಹದಿನೈದು ಬೆಳ್ಳಿ ನಾಣ್ಯಗಳನ್ನೂ ಮತ್ತು ಒಂದುವರೆ ಹೋಮೆರ್ ಜವೆಗೋದಿಯನ್ನೂ ಕೊಟ್ಟು ಅವಳನ್ನು ಕೊಂಡುಕೊಂಡೆನು.